ಧಾರವಾಡ 13: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಧಾರವಾಡ ಜಿಲ್ಲೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು, (ರೆಡ್ ಅಲರ್ಟ್) ಬಾರಿ ಮಳೆಯಿಂದ ನೆರೆಹಾವಳಿ, ಜನ ಜಾನುವಾರು, ಜೀವ ಹಾನಿ, ರಸ್ತೆ ಹಾನಿ, ಸೇತುವೆ ಹಾನಿ, ಸಾರ್ವಜನಿಕ ಆಸ್ತಿ ಹಾನಿಗಳಿಂದ, ನಾಗರಿಕ ಮೂಲಭೂತ ಸೌಕರ್ಯಕ್ಕೆ ತೊಂದರೆ ಉಂಟಾಗದಂತೆ ಕ್ರಮ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ತಮ್ಮ ಸ್ಥಾನದಲ್ಲಿದ್ದು ಮಳೆ ಹಾನಿಯಿಂದ ತೊಂದರೆಗೀಡಾದ ಸಾರ್ವಜನಿಕರ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಸರಿಪಡಿಸಿ ಕ್ರಮ ವಹಿಸುವುದು ಅವಶ್ಯಕತೆವಿರುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಆದೇಶಿಸಿರುತ್ತಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜಿಲ್ಲೆಯ ಎಲ್ಲಾ ಇಲಾಖೆಯ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಅವರ ಅದೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದು ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸುವುದು ಅತಿ ಅವಶ್ಯಕವಿರುವುದರಿಂದ ಎಲ್ಲಾ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಅಧಿಕಾರಿಗಳು ಅನಿವಾರ್ಯ ಪರಿಸ್ಥಿತಿಯಲ್ಲಿ ರಜೆಯ ಮೇಲೆ ತೆರಳಬೇಕಾದಲ್ಲಿ ಜಿಲ್ಲಾಧಿಕಾರಿಗಳ ಪೂರ್ವಾನುಮತಿ ಪಡೆದು ರಜೆಯ ಮೇಲೆ ತೆರಳಬೇಕು.

ಆದೇಶವನ್ನು ಉಲ್ಲಂಘಿಸಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.