ಗ್ರಾ.ಪಂ ಬಾಗಿಲು ಬಂದ್ ಮಾಡಿ ಪ್ರತಿಭಟನೆ

ಪರಿಶಿಷ್ಟ ಜಾತಿಯ ಅಭಿವೃದ್ಧಿಗೆ ಮೀಸಲಿರುವ ಶಾಸನಬದ್ಧ ಅನುದಾನವನ್ನು ದುರುಪಯೋಗ ಮಾಡಿರುವ ಹಾರೋಬೆಳವಡಿ ಗ್ರಾಮ ಪಂಚಾಯತ ಆಡಳಿತದ ವಿರುದ್ಧ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದಲ್ಲಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ  ಹಾಗೂ ಡಾ.ಬಾಬಾಸಾಹೇಬ ಅಂಬೇಡ್ಕರ್ ಯುವಕ ಮಂಡಳದಿಂದ ಗ್ರಾಮ ಪಂಚಾಯತ ಬಾಗಿಲು ಬಂದ್ ಮಾಡಿ ಪ್ರತಿಭಟನೆ ಮಾಡಿದರು.

15 ನೇ ಹಣಕಾಸು ಯೋಜನೆಯಲ್ಲಿ ಆಗಿರುವ ಭ್ರಷ್ಟಾಚಾರದ ಕುರಿತು ಉಲ್ಲಾಸ ದೊಡ್ಡಮನಿ ಖಂಡಿಸಿದರು. ಜಿಲ್ಲಾ ಸಮಿತಿಯ ನಾಗರಾಜ ಕಾಳೆ ಮಾತನಾಡಿ ಅಮೃತ ದೇಸಾಯಿ ಶಾಸಕರಿದ್ದಾಗ ಎಸ್ ಸಿ ಅನುದಾನದ 40 ಲಕ್ಷ ರೂಪಾಯಿಗಳನ್ನು ಯಾವುದೇ ಕಾಮಗಾರಿಗಳನ್ನು ಮಾಡದೇ ಗುಳುಂ ಮಾಡಿರುವ ಹಾಗೂ ಇತರೆ ಇಲಾಖೆಗಳಲ್ಲಿ ಆಗಿರುವ ಭ್ರಷ್ಟಾಚಾರವನ್ನು ಖಂಡಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

10 ವರ್ಷದಿಂದ ಇದುವರೆಗೂ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ನಮ್ಮ ಸಮುದಾಯಕ್ಕೆ ಯಾವುದೇ ಅನುದಾನ ನೀಡಿಲ್ಲಾ ಸಮಸ್ಯೆ ಕುರಿತು ಆಲಿಸಿರುವದಿಲ್ಲಾ ಎಂದು ಎಲ್ಲ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಈರಪ್ಪ ಕೋಲಕಾರ, ಗಂಗಪ್ಪ ದೊಡ್ಡಮನಿ, ವಿಜಯಲಕ್ಷೀ ದೊಡ್ಡಮನಿ, ಮುತ್ತು ಗುಬ್ಬಿ, ರತ್ನಾ ಮೆಳೆಪ್ಪನವರ, ಗಿರಿಜವ್ವ ದೊಡಮನಿ, ಶಿವರುದ್ರ ಮೆಳೆಪ್ಪನವರ, ಸಮುದಾಯದ ಮುಖಂಡರು, ಮಹಿಳೆಯರು, ಯುವಕರು ಜೈ ಭೀಮ್ ಘೋಷಣೆಯೊಂದಿಗೆ ಪ್ರತಿಭಟನೆ ಮಾಡಿದರು.

  • Related Posts

    ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ

    ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ  ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…

    ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷರರ ಹುದ್ದೆಗೆ ಅರ್ಜಿ ಆಹ್ವಾನ

    ಧಾರವಾಡ ಡಿ.೨೧ :  2024-25 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ…

    RSS
    Follow by Email
    Telegram
    WhatsApp
    URL has been copied successfully!