ಉ.ಕ ಭಾಗದ ಉದ್ಯೋಗಾbಕಾಂಕ್ಷಿಗಳ ಕನಸಿಗೆ ವೇದಿಕೆ ಕಲ್ಪಿಸಿದ ಅರವಿಂದ ಬೆಲ್ಲದ

ಧಾರವಾಡ : ಶಾಸಕರಾದ ಅರವಿಂದ ಬೆಲ್ಲದ ಅವರ ನೇತೃತ್ವದಲ್ಲಿ, ಬಿಜೆಪಿ ಕಾರ್ಯಕರ್ತರು‌ ಸಹಯೋಗದೊಂದಿಗೆ ನಿನ್ನೆ ಧಾರವಾಡದ ಕೆ ಎಲ್ ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಉದ್ಯೋಗ ಮೇಳವು ಯಶಸ್ವಿಯಾಗಿ ಸಮಾರೋಪಗೊಂಡಿತು.

ಈ ಉದ್ಯೋಗ ಮೇಳವನ್ನು ಶಾಸಕರಾದ ಅರವಿಂದ ಬೆಲ್ಲದ ಅವರು ಉದ್ಘಾಟಿಸಿ ಮಾತನಾಡಿ ” ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಗ್ರಹಣ ಹಿಡಿದಿದೆ. ಅಲ್ಲದೇ, ನೇಮಕಾತಿಗಳೂ ವಿನಾಕಾರಣ ವಿಳಂಬಗೊಳ್ಳುತ್ತಿವೆ. ಆಯ್ಕೆ ಪರೀಕ್ಷೆ ನಡೆಸುವಲ್ಲಿಯೂ ನಿರ್ಲಕ್ಷ್ಯತನ ತೋರುತ್ತಿರುವುದರಿಂದ, ನಡೆದ ಪರೀಕ್ಷೆಗಳಲ್ಲಿಯೂ ಎಡವಟ್ಟುಗಳಾಗಿ, ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ನಿರುದ್ಯೋಗ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ, ಉತ್ತರ ಕರ್ನಾಟಕದ ಉದ್ಯೋಗಾಕಾಂಕ್ಷಿ ಯುವಜನತೆಗೆ ಪಾರದರ್ಶಕ ಹಾಗೂ ಪಕ್ಷಪಾತವಿಲ್ಲದ ಸೂಕ್ತ ವೇದಿಕೆಯನ್ನು ಸ್ಥಾಪಿಸುವ ನಮ್ಮ ಪ್ರಯತ್ನಕ್ಕೆ ಈ ಬೃಹತ್ ಉದ್ಯೋಗ ಮೇಳ ಮುನ್ನುಡಿಯಾಗಿದೆ.‌ ಸ್ವಾಮಿ ವಿವೇಕಾನಂದರು ಹೇಳಿದಂತೆ, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಾಗಿ, ನಾವು ಯುವ ಸಮುದಾಯವನ್ನು ಸದೃಢಗೊಳಿಸಬೇಕಿದೆ” ಎಂದರು. ಅಲ್ಲದೇ, ಈ ಉದ್ಯೋಗಮೇಳದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.

ಉದ್ಯೋಗ ಮೇಳದಲ್ಲಿ ಪಾಲ್ಗೊಂಡಿದ್ದ 67 ಕ್ಕೂ ಅಧಿಕ ಕಂಪನಿಗಳು, 2890 ಉದ್ಯೋಗಾಕಾಂಕ್ಷಿಗಳನ್ನು ಸಂದರ್ಶನ ನಡೆಸಿದವು. ಇದರಲ್ಲಿ 1035 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

  • Related Posts

    ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ

    ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ  ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…

    ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷರರ ಹುದ್ದೆಗೆ ಅರ್ಜಿ ಆಹ್ವಾನ

    ಧಾರವಾಡ ಡಿ.೨೧ :  2024-25 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ…

    RSS
    Follow by Email
    Telegram
    WhatsApp
    URL has been copied successfully!