ಧಾರವಾಡ ಜ.31 : 2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ (ಜನವರಿ 10, 2024ರ ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್.ಡಿ ಪ್ರಾರಂಭಿಸಿರುವ) ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ, ಫೆಲೋಶಿಫ್‍ಗೆ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ದಿನಾಂಕವನ್ನು ಫೆಬ್ರವರಿ 10, 2025 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 8050770004 ಗೆ ಸಂಪರ್ಕಿಸಬಹುದು ಅಥವಾ ವೆಬ್ ಸೈಟ್‍ಗೆ https://bcwd.karnataka.gov.in ಬೇಟಿ ನೀಡಿಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.