ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ 73,811 ಪ್ರಕರಣಗಳು ಇತ್ಯರ್ಥ

ಧಾರವಾಡ ಡಿ. 17: ಡಿಸೆಂಬರ 14 ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ರಾಜೀ ಆಗಬಹುದಾದಂತಹ 17,596 ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 12,551 ಪ್ರಕರಣಗಳನ್ನು ಹಾಗೂ 63,013 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ಅವುಗಳ ಪೈಕಿ 61,260 ಪ್ರಕರಣಗಳನ್ನು ಸೇರಿ ಒಟ್ಟು 73,811 ಪ್ರಕರಣಗಳನ್ನು ರಾಜೀ ಸಂಧಾನ ಮಾಡಿಸಲಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥ ಪಡಿಸಿಕೊಂಡ ಒಟ್ಟು ಮೊತ್ತ 8,09,37,468 ರೂಪಾಯಿಗಳು. ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದ ಪ್ರಕರಣಗಳಲ್ಲಿ ಇತ್ಯರ್ಥ ಪಡಿಸಿಕೊಂಡ ಒಟ್ಟು ಮೊತ್ತ 54,59,56,204 ರೂಪಾಯಿಗಳು.

ಧಾರವಾಡ ಜಿಲ್ಲೆಯ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿದ್ದ ವೈವಾಹಿಕ, ಜೀವನಾಂಶ ಪ್ರಕರಣಗಳಲ್ಲಿ ನಡೆದ ರಾಜೀ ಸಂಧಾನದ ಪರವಾಗಿ 8 ಪ್ರಕರಣಗಳು ಯಶಸ್ವಿಯಾಗಿ ದಂಪತಿಗಳು ಒಂದಾಗಿದ್ದಾರೆ.

31 ಪ್ರಕರಣಗಳಲ್ಲಿ ಹಿರಿಯ ನಾಗರಿಕರು ರಾಜೀ ಪ್ರಕರಣದ ಮೂಲಕ ತಮ್ಮ ವಿವಾದಗಳನ್ನು ಇತ್ಯರ್ಥಪಡಿಸಿಕೊಂಡಿದ್ದಾರೆ. ಲೋಕ ಅದಾಲತ್‍ನಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ಹಾಗೂ ಧಾರವಾಡ ಜಿಲ್ಲೆಯ ಎಲ್ಲಾ ನ್ಯಾಯಾಧೀಶರಿಗೆ, ನ್ಯಾಯವಾದಿಗಳಿಗೆ, ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆ, ವಿಮಾ ಕಂಪನಿಗಳು ಅವುಗಳ ನ್ಯಾಯವಾದಿಗಳಿಗೆ, ಅಭಿಯೋಜನೆಯ ಅಧಿಕಾರಿಗಳಿಗೆ, ಪೆÇಲೀಸ್ ಇಲಾಖೆಯ ಅಧಿಕಾರಿಗಳಿಗೆ ಮತ್ತು ಕಕ್ಷಿದಾರರಿಗೆ ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪರವಾಗಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ಅವರು ಕೃತಜ್ಞತೆ ತಿಳಿಸಿದ್ದಾರೆ.

  • Related Posts

    ಸಿಟಿ ರವಿ ಹೇಳಿಕೆ ಸತ್ಯಶೋಧನೆ ಆಗುವ ಮೊದಲು ಯಾವುದೇ ನಿರ್ಧಾರಕ್ಕೆ ಬರುವುದು ತಪ್ಪು- ಸಂಸದ ಬಸವರಾಜ ಬೊಮ್ಮಾಯಿ

    ರಾಜ್ಯದಲ್ಲಿ ಪೊಲೀಸ್ ದುರ್ಬಳಕೆ ಹೆಚ್ಚಾಗುತ್ತಿದೆ ಬಸವರಾಜ ಬೊಮ್ಮಾಯಿ ನವದೆಹಲಿ  ಡಿ.21 : ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ…

    ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷರರ ಹುದ್ದೆಗೆ ಅರ್ಜಿ ಆಹ್ವಾನ

    ಧಾರವಾಡ ಡಿ.೨೧ :  2024-25 ನೇ ಸಾಲಿನಲ್ಲಿ ಧಾರವಾಡ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಹುಬ್ಬಳ್ಳಿ ಅಂಚಟಗೇರಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಡಿಸೆಂಬರ…

    RSS
    Follow by Email
    Telegram
    WhatsApp
    URL has been copied successfully!