ಧಾರವಾಡ : ಹೆಬ್ಬಳ್ಳಿ ಗ್ರಾಮ ಪಂಚಾಯಿತಿಯ ಮುಂದಿನ ಆವರಣದಲ್ಲಿ ಸನ್ 2024 25 ನೇ ಸಾಲಿನ ಒಂದನೇ ಸುತ್ತಿನ ಗ್ರಾಮ ಸಭೆಯನ್ನು ಗ್ರಾಮ ಸಭೆಯ ಸಮನ್ವಯ ಅಧಿಕಾರಿಗಳು, ಗ್ರಾಮ ಪಂಚಾಯತಿಯ ಮಾನ್ಯ ಅಧ್ಯಕ್ಷರು ಉಪಾಧ್ಯಕ್ಷರು ಗೌರವಾನ್ವಿತ ಸರ್ವ ಸದಸ್ಯರು ಎಲ್ಲಾ ಗ್ರಾಮದ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಗ್ರಾಮದ ಎಲ್ಲ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಹಶಿಕ್ಷಕರು, ಮುರಾರ್ಜಿ ದೇಸಾಯಿ ಶಾಲೆಯ ಪ್ರಾಂಶುಪಾಲರು ನೆಹರು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಪ್ರಾಂಶುಪಾಲರು ಗ್ರಾಮದ ಎಲ್ಲ ಚುನಾಯಿತ ಪ್ರತಿನಿಧಿಗಳು ಗುರುಹಿರಿಯರು ಹಾಗೂ ಸಾರ್ವಜನಿಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,ಕಾರ್ಯದರ್ಶಿಗಳು , ಮತ್ತು ಸಿಬ್ಬಂದಿ ವರ್ಗದವರು ಸೇರಿ ಗ್ರಾಮ ಸಭೆಯಲ್ಲಿ ವಿವಿಧ ಇಲಾಖೆಯಿಂದ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ಗ್ರಾಮ ಸಭೆಯಲ್ಲಿ ಪಟ್ಟಿಮಾಡಿ, ವಿವಿಧ ವಸತಿ ಯೋಜನೆಯಲ್ಲಿನ ಫಲಾನುಭವಿಗಳನ್ನು ಆಯ್ಕೆ ಮಾಡಿ, ಸನ್ 2025 26 ನೇ ಸಾಲಿನ ಎಂ ಜಿ ಎನ್ ಆರ್ ಇ ಜಿ ಎ ಯೋಜನೆಯ ಕ್ರಿಯಾ ಯೋಜನೆ ಮತ್ತು ಕಾಮಗಾರಿ ಗುಚ್ಛವನ್ನು ತಯಾರಿಸಲಾಯಿತು ಮತ್ತು ಇವತ್ತಿನ ಗ್ರಾಮ ಸಭೆಯನ್ನು ಗ್ರಾಮದ ಎಲ್ಲರ ಸಮ್ಮುಖದಲ್ಲಿ ಯಶಸ್ವಿಗೊಳಿಸಲಾಯಿತು.
ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ
ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…