ಪಥಸಂಚಲನಕ್ಕೆ ಅತಿಥಿಯಾಗಿ ಶಿವಯೋಗಿ ಹಾವೇರಿ ಆಯ್ಕೆ

ಧಾರವಾಡ 25 : ದೆಹಲಿಯ ಕರ್ತವ್ಯ ಪಥ ನಲ್ಲಿ ನಡೆಯಲಿರುವ 76ನೇ ಗಣರಾಜ್ಯೋತ್ಸವ ಪಥಸಂಚಲನದ ವೀಕ್ಷಣೆಗೆ ವಿಶೇಷ ಅತಿಥಿಯಾಗಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ರಾಷ್ಟ್ರೀಯ ಸೇವಾ ಯೋಜನಾ ಕೋಶದಿಂದ ವಿದ್ಯಾರ್ಥಿ ಕು.ಶಿವಯೋಗಿ ಹಾವೇರಿ ಆಯ್ಕೆಯಾಗಿರುತ್ತನೆಂದು ರಾಷ್ಟ್ರೀಯ ಸೇವಾ ಯೋಜನಾ ಕೋಶದ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರೊ. ಎಂ. ಬಿ. ದಳಪತಿ ರವರು ತಿಳಿಸಿದ್ದಾರೆ. ಸದರಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ವಿಶೇಷ ಅತಿಥಿಯಾಗಿ ಇಂಡೊನೆಷ್ಯಾದ ಅಧ್ಯಕ್ಷರು ಮತ್ತು ಮಂತ್ರಿ ಮಂಡಲದ ಎಲ್ಲಾ ಸದಸ್ಯರುಗಳು, ಗಣ್ಯರು ಭಾಗಿಯಾಗಲಿದ್ದಾರೆ. ಪಥಸಂಚಲನಕ್ಕೆ ಆಯ್ಕೆಯಾದ ಈ ವಿದ್ಯಾರ್ಥಿಗೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು, ವಿಶ್ವವಿದ್ಯಾಲಯದ ಎನ್‌.ಎಸ್.ಎಸ್. ಸಂಯೋಜನ ಅಧಿಕಾರಿಗಳು, ಅಭಿನಂದಿಸಿ ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

  • Related Posts

    ಮಾರುಕಟ್ಟೆಯ ಹಮಾಲರ ಸಂಘದಿಂದ ಮುರುಘಮಠಕ್ಕೆ ಕ್ವೀಂಟಲ್ ಬೆಲ್ಲ ಪ್ರಸಾದ

    ಶ್ರೀ ಮಧತನಿ ಮುರುಗೇಂದ್ರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ಅಂಗವಾಗಿ ಧಾರವಾಡದ ಮೃತ್ಯುಂಜಯ ಮಾರುಕಟ್ಟೆಯ ಹಮಾಲರ ಸಂಘದಿಂದ, ಹಣ್ಣೊಂದು ಕ್ವೀಂಟಲ್ ಬೆಲ್ಲವನ್ನು ಪ್ರಸಾದಕ್ಕೆ ನೀಡಿದರು. ಎತ್ತಿನ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಎ ಪಿ ಎಮ್ ಸಿ ಇಂದ ಶ್ರೀ ಮುರುಘಮಠಕ್ಕೆ ನೀಡಿದರು. ಈ ಸಂದರ್ಭದಲ್ಲಿ…

    ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಸಾಮಾನ್ಯ ಸಭೆ

    ಧಾರವಾಡ 01: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಧಾರವಾಡ ಶಾಖೆಯ 2024 2025 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮಂಗಳವಾರ, ದಿ 04 ರಂದು ಮುಂಜಾನೆ 10:30 ಗಂಟೆಗೆ ಕನ್ನಡ ಕುಲಪುರೋಹಿತ ಆಲೂರು ವಂಕಟರಾವ ಸಾಂಸ್ಕೃತಿಕ ಭವನದಲ್ಲಿ  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ…

    RSS
    Follow by Email
    Telegram
    WhatsApp
    URL has been copied successfully!